Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:11 - ಕನ್ನಡ ಸತ್ಯವೇದವು C.L. Bible (BSI)

11 ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ, ಆದರೆ ನಾನು ನಿಮ್ಮಲ್ಲಿ ಯಾವಾಗಲೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಗರಿಬ್ ಲೊಕಾ ಕನ್ನಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾತ್ಯಾತ್, ಖರೆ ಮಿಯಾ ತುಮ್ಚ್ಯಾ ವಾಂಗ್ಡಾ ಕನ್ನಾಬಿ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:11
16 ತಿಳಿವುಗಳ ಹೋಲಿಕೆ  

ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.


ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು