Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:14 - ಕನ್ನಡ ಸತ್ಯವೇದವು C.L. Bible (BSI)

14 ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬವನು ಮಹಾಯಾಜಕರ ಬಳಿಗೆ ಹೋಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಂತರ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಮಹಾಯಾಜಕರ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತ ಎಂಬುವನು ಮುಖ್ಯಯಾಜಕರ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಬಾರಾ ಜಾನಾ ಶಿಸಾನಿತ್ಲೊ ಎಕ್ಲೊ ಜುದಾಸ್ ಇಸ್ಕರಿಯೊತ್ ಮನ್ತಲೊ ಮುಖ್ಯ ಯಾಜಕಾನಿಕ್ಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:14
14 ತಿಳಿವುಗಳ ಹೋಲಿಕೆ  

ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.


ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.


ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.


ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು,


ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.


("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು