Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:27 - ಕನ್ನಡ ಸತ್ಯವೇದವು C.L. Bible (BSI)

27 ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟು - ಇದರಲ್ಲಿರುವದನ್ನು ಎಲ್ಲರೂ ಕುಡಿಯಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರಸಲ್ಲಿಸಿ, “ನೀವೆಲ್ಲರೂ ಇದನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ತೆನಿ ಕಟೊರೊ ಘೆಟ್ಲ್ಯಾನ್ ಅನಿ ಅನಿಎಗ್ದಾ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಶಿಸಾಕ್ನಿ ದಿವ್ನ್, “ಹೆ ಘೆವಾ ಅನಿ ತುಮಿ ಸಗ್ಳೆ ಜಾನಾ ಫಿವಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:27
12 ತಿಳಿವುಗಳ ಹೋಲಿಕೆ  

ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.


ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು