Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:29 - ಕನ್ನಡ ಸತ್ಯವೇದವು C.L. Bible (BSI)

29 ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ನನ್ನ ತಂದೆಯ ರಾಜ್ಯದಲ್ಲಿ ಮತ್ತೆ ಒಟ್ಟಾಗಿ ಸೇರಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ತನಕ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ ಜನರಿಗೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಿಯಾ ತುಮ್ಕಾ ಸಾಂಗ್ತಾ, ಮಾಜ್ಯಾ ಬಾಬಾಚ್ಯಾ ರಾಜಾತ್ ತುಮ್ಚ್ಯಾ ವಾಂಗ್ಡಾ ನ್ಹವಿ ವಾಯ್ನ್ ಫಿತಲ್ಯಾ ದಿಸಾ ಪತರ್ ಹಿ ವಾಯ್ನ್ ಮಿಯಾ ಅನಿ ಕನ್ನಾಚ್ ಫಿ ನಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:29
31 ತಿಳಿವುಗಳ ಹೋಲಿಕೆ  

ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II


ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.


ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು