Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:31 - ಕನ್ನಡ ಸತ್ಯವೇದವು C.L. Bible (BSI)

31 ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಯೇಸು, ಅವರಿಗೆ - ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ ಶಿಸಾಕ್ನಿ,“ ಆಜ್ ಹ್ಯಾಚ್ ರಾತ್ತಿನ್ ತುಮಿ ಸಗ್ಳೆ ಜಾನಾ ಮಾಕಾ ಸೊಡುನ್ ಪಳುನ್ ಜಾತ್ಯಾಶಿ. ಪವಿತ್ರ್ ಪುಸ್ತಕಾತ್ ದೆವ್ ಮನ್ತಾ, ಮಿಯಾ ಕುರ್‍ಬುರಾಕ್ ಜಿವಾನಿ ಮಾರ್‍ತಾ ಅನಿ ತಾಂಡ್ಯಾತ್ಲಿ ಬಕ್ರಿ ಸಗ್ಳಿ ಮಾಳ್ಬರ್ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:31
16 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು