Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:41 - ಕನ್ನಡ ಸತ್ಯವೇದವು C.L. Bible (BSI)

41 ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜಾಗೆ ರ್‍ಹಾವಾ ಅನಿ ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ ಪಡಿನಸ್ತಾನಾ ರ್‍ಹವ್‍ಸಾಟ್ನಿ ಮಾಗ್ನಿ ಕರಾ. ಅತ್ಮ್ಯಾಕ್ ಮನ್ ಹಾಯ್ ಹೊಯ್ ಖರೆ ಆಂಗಾಕ್ ತವ್ಡೊ ಬಳ್ ನಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:41
34 ತಿಳಿವುಗಳ ಹೋಲಿಕೆ  

ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಕ್ಲುಪ್ತಸ್ಥಳಕ್ಕೆ ಬಂದಾಗ ಯೇಸು ಅವರಿಗೆ, “ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿರಿ,” ಎಂದು ಹೇಳಿ,


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”


ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು