Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:75 - ಕನ್ನಡ ಸತ್ಯವೇದವು C.L. Bible (BSI)

75 ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

75 ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

75 ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

75 “ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

75 ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

75 ತನ್ನಾ ಪೆದ್ರುಕ್ ಜೆಜುನ್ “ಕೊಂಬೊ ಭೊಕುಚ್ಯಾ ಅದ್ದಿ ತಿನ್‍ದಾ ತಿಯಾ ಮಾಜಿ ವಳಕುಚ್‍ ನಾ ಮನುನ್ ಸಾಂಗ್ತೆಯ್.” ಮನುನ್ ಸಾಂಗಲ್ಲಿ ಯಾದ್ ಯೆಲಿ. ತನ್ನಾ ತೊ ಭಾಯ್ರ್ ಗೆಲೊ ಅನಿ ಗಳ್ಗಳುನ್ ರಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:75
11 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.


ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.


ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು