Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:19 - ಕನ್ನಡ ಸತ್ಯವೇದವು C.L. Bible (BSI)

19 ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:19
28 ತಿಳಿವುಗಳ ಹೋಲಿಕೆ  

ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.


ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು.


ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.


ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು