Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:24 - ಕನ್ನಡ ಸತ್ಯವೇದವು C.L. Bible (BSI)

24 ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಬಗುನ್ ಪಿಲಾತಾನ್ ಅನಿ ಫಿಡೆ ಬೊಲುನ್ ಉಪ್‌ಯೊಗ್ ನಾ, ಬೊಲ್ಲ್ಯಾರ್ ಡಂಗೊ ಉಟ್ಲ್ಯಾರ್‍ಬಿ ಉಟ್ಲೊ ಮನುನ್ ಯವ್ಜುನ್, ತೆನಿ ಉಲ್ಲೆ ಪಾನಿ ಘೆಟ್ಲ್ಯಾನ್ ಅನಿ ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಅಪ್ನಾಚಿ ಹಾತಾ ಧುವ್ನ್ ಘೆಟ್ಲ್ಯಾನ್, ಅನಿ, “ಹ್ಯಾ ಮಾನ್ಸಾಚ್ಯಾ ಮರ್‍ನಾಕ್ ಮಿಯಾ ಕಾರನ್ ನ್ಹಯ್! ತುಮಿಚ್ ತೆ ಬಗುನ್ ಘೆವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:24
16 ತಿಳಿವುಗಳ ಹೋಲಿಕೆ  

“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


“ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆಮೀಯನ ಮಾತುಗಳು ಈಡೇರಿದವು.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


“ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.


ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ, ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು