Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:26 - ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಪಿಲಾತನು ಅವರ ಇಷ್ಟದಂತೆಯೇ ಬರಬ್ಬನನ್ನು ಬಿಟ್ಟುಕೊಟ್ಟನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೇರಿಸಲು ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಪಿಲಾತಾನ್ ಲೊಕಾಂಚ್ಯಾ ಮನಾ ಸರ್ಕೆ ಬಾರಾಬ್ಬಾಸಾಕ್ ಸೊಡುನ್ ದಿಲ್ಯಾನ್, ಅನಿ ಜೆಜುಕ್ ಬಾರ್‍ಕೊಲಾನಿ ಮಾರುಕ್ ಲಾವುನ್ ಕುರ್ಸಾರ್ ಮಾರುಕ್ ಮನುನ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:26
11 ತಿಳಿವುಗಳ ಹೋಲಿಕೆ  

ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಆಮೇಲೆ ಪಿಲಾತನು ಯೇಸು ಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಗಳಿಂದ ಹೊಡೆಸಿದನು.


ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.


ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು