Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:29 - ಕನ್ನಡ ಸತ್ಯವೇದವು C.L. Bible (BSI)

29 ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ತೆನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಕಿರಿಟ್ ಕರುನ್ ತೆಚ್ಯಾ ಟಕ್ಲ್ಯಾ ವರ್‍ತಿ ಘಾಟ್ಲ್ಯಾನಿ. ಅನಿ ತೆಚ್ಯಾ ಉಜ್ವ್ಯಾ ಹಾತಿತ್ ಎಕ್ ದಾಂಡೊ ದಿಲ್ಯಾನಿ. ಅನಿ ತೆಚ್ಯಾ ಫಿಡ್ಯಾತ್ ಡಿಂಬಿಯಾ ಘಾಲುನ್, “ಜುದೆವಾಂಚ್ಯಾ ರಾಜಾಕ್ ಜೈ ಹೊಂವ್ದಿ!” ಮನುನ್ ಎಡ್ಸಡುನ್ ದಾಕ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:29
14 ತಿಳಿವುಗಳ ಹೋಲಿಕೆ  

ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.


“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II


ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು