Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಂಚೆ ಎಡ್ಸಡುನ್ ಸರಲ್ಲ್ಯಾ ತನ್ನಾ ತೆನಿ ತೆಕಾ ನೆಸ್ವಲ್ಲೊ ತಾಂಬ್ಡೊ ಝಗೊ ವೊಡುನ್ ಕಾಡ್ಲ್ಯಾನಿ ಅನಿ ತೆಚೆ ಅದ್ದಿಚೆಚ್ ಕಪ್ಡೆ ತೆಕಾ ನೆಸ್ವುಲ್ಯಾನಿ. ಮಾನಾ ತೆನಿ ತೆಕಾ ಕುರ್ಸಾರ್ ಮಾರುಕ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:31
12 ತಿಳಿವುಗಳ ಹೋಲಿಕೆ  

ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.


ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.


“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.


ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು