Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:35 - ಕನ್ನಡ ಸತ್ಯವೇದವು C.L. Bible (BSI)

35 ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸೈನಿಕರು ಆತನನ್ನು ಶಿಲುಬೆಗೆ ಮೊಳೆಗಳಿಂದ ಜಡಿದರು. ನಂತರ ಉಡುಪಿಗಾಗಿ ತಮ್ಮಲ್ಲಿಯೇ ಚೀಟಿಹಾಕಿ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಮಾನಾ ತೆನಿ ತೆಕಾ ಕುರ್ಸಾ ವರ್‍ತಿ ಮಾರ್‍ಲ್ಯಾನಿ ಅನಿ ಚಿಟಿಯಾ ಘಾಲುನ್ ತೆಚೆ ಕಪ್ಡೆ ತೆನಿ ವಾಟುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:35
10 ತಿಳಿವುಗಳ ಹೋಲಿಕೆ  

ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು