Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:40 - ಕನ್ನಡ ಸತ್ಯವೇದವು C.L. Bible (BSI)

40 “ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಮಟ್ಲ್ಯಾರ್ ಭಾಂದ್‍ನಾರ್ ಹೊತ್ತೆ ನ್ಹಯ್! ತಿಯಾ ದೆವಾಚೊ ಲೆಕ್ ರ್‍ಹಾಲ್ಯಾರ್ ತುಕಾಚ್ ಹುರ್‍ವುನ್ ಘೆ! ಕುರ್ಸಾ ವೈನಾ ಉತ್ರುನ್ ಯೆ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:40
13 ತಿಳಿವುಗಳ ಹೋಲಿಕೆ  

“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಅಂತೆಯೇ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು