Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:41 - ಕನ್ನಡ ಸತ್ಯವೇದವು C.L. Bible (BSI)

41 ಅಂತೆಯೇ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮುಖ್ಯ ಯಾಜಕಾನಿ, ಶಾಸ್ತರಾ ಶಿಕ್ವುತಲ್ಯಾನಿ ಅನಿ ಜಾನ್ತ್ಯಾ ಲೊಕಾನಿಬಿ ಅಸೆಚ್ ಜೆಜುಕ್ ಎಡ್ಸಡ್ಲ್ಯಾನಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:41
12 ತಿಳಿವುಗಳ ಹೋಲಿಕೆ  

ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II


ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?


ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?


“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.


“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು