Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:46 - ಕನ್ನಡ ಸತ್ಯವೇದವು C.L. Bible (BSI)

46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ಏಲೀ, ಏಲೀ, ಲಮಾ ಸಬಕ್ತಾನಿ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಸುಮಾರ್ ತಿನ್ ಘಂಟ್ಯಾಕ್ ಜೆಜುನ್,“ಎಲಿ ಎಲಿ ಲಾಮಾ ಸಬಾಕ್ತಾನಿ?” ಮನುನ್ ಬೊಬ್ ಮಾರ್‍ಲ್ಯಾನ್. ತಸೆಮಟ್ಲ್ಯಾರ್, ಮಾಜ್ಯಾ ದೆವಾ, ಮಾಜ್ಯಾ ದೆವಾ ತಿಯಾ ಮಾಕಾ ಕಶ್ಯಾಕ್ ಇಸರ್‍ಲೆ? ಮನುನ್ ಅರ್ತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:46
9 ತಿಳಿವುಗಳ ಹೋಲಿಕೆ  

ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು