Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜುದಾಸ್ ದೆವಾಚ್ಯಾ ಗುಡಿತ್ ಗೆಲೊ ಅನಿ ತೆ ಪೈಸೆ ಥೈಚ್ ಟಾಕುನ್ ಭಾಯ್ರ್ ಗೆಲೊ ಅನಿ ಪಾಸಿ ಘಾಲುನ್ ಘೆವ್ನ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:5
12 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.


ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.


ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.


ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು