Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:50 - ಕನ್ನಡ ಸತ್ಯವೇದವು C.L. Bible (BSI)

50 ಯೇಸುಸ್ವಾಮಿ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಅಸುನೀಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೇಸು ತಿರಿಗಿ ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತನ್ನಾ ಜೆಜುನ್ ಅನಿಎಗ್ದಾ ಮೊಟ್ಯಾನ್ ಬೊಬ್ ಮಾರ್‍ಲ್ಯಾನ್ ಅನಿ ಜಿವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:50
14 ತಿಳಿವುಗಳ ಹೋಲಿಕೆ  

ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು.


ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು