Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:54 - ಕನ್ನಡ ಸತ್ಯವೇದವು C.L. Bible (BSI)

54 ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಜೆಜುಕ್ ರಾಕುಕ್ ಮನುನ್ ಹೊತ್ತ್ಯಾ ಸೈನಿಕಾನಿ ಅನಿ ಸೆಂಬರ್ ಸೈನಿಕಾಂಚ್ಯಾ ಮುಖಂಡಾನ್ ಭುಕಂಪ್ ಹೊಲ್ಲೆ ಅನಿ ಥೈ ಕಾಯ್ ಕಾಯ್ ಹೊಲ್ಲೆ ಸಗ್ಳೆ ಬಗಟ್ಲ್ಯಾನಿ, ತೆನಿ ಭಿಂವ್ನ್ ಗೆಲ್ಯಾನಿ, ಅನಿ, “ಖರೆಚ್ ತೊ ದೆವಾಚೊ ಲೆಕ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:54
22 ತಿಳಿವುಗಳ ಹೋಲಿಕೆ  

ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.


ಅನಂತರ ಅಲ್ಲೇ ಕುಳಿತು ಕಾವಲುಕಾಯುತ್ತಾ ಇದ್ದರು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.


ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.


ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,


“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು