Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:17 - ಕನ್ನಡ ಸತ್ಯವೇದವು C.L. Bible (BSI)

17 ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಲ್ಲಿ ಆತನನ್ನು ಕಂಡು ಆತನಿಗೆ ಅಡ್ಡಬಿದ್ದರು; ಆದರೆ ಕೆಲವರು ಸಂದೇಹಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಥೈ ಜೆಜುಕ್ ಬಗುನ್ ತೆನಿ ತೆಚೆ ಆರಾದನ್ ಕರ್‍ಲ್ಯಾನಿ. ಖರೆ ತೆಂಚ್ಯಾತ್ಲ್ಯಾ ಉಲ್ಲ್ಯಾ ಲೊಕಾಕ್ನಿ ಉಲ್ಲೊ ಸಂಶೆವ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:17
10 ತಿಳಿವುಗಳ ಹೋಲಿಕೆ  

ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.


ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ.


ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆಹೋದರು.


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು