Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತನ್ನಾ ಜೆಜುನ್ ಜಗ್ಗೊಳ್ ಯೆವ್ನ್, “ಸಗ್ಳ್ಯಾ ಸರ್‍ಗಾ ವರ್‍ತಿ ಅನಿ ಜಿಮ್ನಿ ವರ್‍ತಿ ಸಗ್ಳೊ ಅದಿಕಾರ್ ಮಾಕಾ ದಿಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:18
31 ತಿಳಿವುಗಳ ಹೋಲಿಕೆ  

ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.


“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು