Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:19 - ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆಮನುನ್ ತುಮಿ ಸಗ್ಳ್ಯಾಕ್ಡೆ ಸಗ್ಳ್ಯಾ ದೆಸಾಂಚ್ಯಾ ಲೊಕಾನಿಕ್ನಿ ಜಾವಾ ಅನಿ ತೆಂಕಾ ಮಾಜಿ ಶಿಸಾ ಕರಾ: ಅನಿ ತೆಂಕಾ ಬಾಬಾಚ್ಯಾ ಲೆಕಾಚ್ಯಾ ಅನಿ ಪವಿತ್ರ್ ಆತ್ಮ್ಯಾಚ್ಯಾ ನಾವಾನ್ ಬಾಲ್ತಿಮ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:19
39 ತಿಳಿವುಗಳ ಹೋಲಿಕೆ  

ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:


ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?


ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು