Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:3 - ಕನ್ನಡ ಸತ್ಯವೇದವು C.L. Bible (BSI)

3 ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ಮುಖಭಾವವು ವಿುಂಚಿನಂತೆ ಇತ್ತು, ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆ ತೊಂಡ್ ಮಿಂಚಾ ಸರ್ಕೆ ದಿಸಿ ಅನಿ ತೆಚೆ ಕಪ್ಡೆ ಭರ್‍ಪಾಚ್ಯಾ ಸರ್ಕೆ ಫಾಂಡ್ರೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:3
14 ತಿಳಿವುಗಳ ಹೋಲಿಕೆ  

ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.


ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು.


ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು