Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:1 - ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತ್ಯಾ ಎಳಾರ್ ಜುದೆಯಾ ಮನ್ತಲ್ಯಾ ಪ್ರಾಂತ್ಯಾತ್ ಜುವಾಂವ್ ಬಾವ್ತಿಸ್ ಹೊತ್ತೊ, ತೊ ಡಂಗ್ಳಿತ್ ಶಿಕ್ವುಲಾಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:1
27 ತಿಳಿವುಗಳ ಹೋಲಿಕೆ  

ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.


ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?


ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?


ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.


ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು