Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:10 - ಕನ್ನಡ ಸತ್ಯವೇದವು C.L. Bible (BSI)

10 ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಝಾಡಾಚ್ಯಾ ಮುಳಾತ್ ಕುರಾಡ್ ಥವ್ನ್ ಹೊಲ್ಲಿ ಹಾಯ್, ಜೆ ಖಲೆ ಝಾಡ್ ಬರಿ ಫಳಾ ದಿ ನಾ ತೆ ಹರಿ ಎಕ್ ಝಾಡ್ ಮುಳಾತ್ನಾಚ್ ತೊಡುನ್ ಆಗಿತ್ ಟಾಕುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:10
26 ತಿಳಿವುಗಳ ಹೋಲಿಕೆ  

ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.


ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.


ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II


ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು