Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:5 - ಕನ್ನಡ ಸತ್ಯವೇದವು C.L. Bible (BSI)

5 ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆರೂಸಲೇಮೂ ಎಲ್ಲಾ ಯೂದಾಯವೂ ಯೊರ್ದನ್‍ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಯೋಹಾನನ ಉಪದೇಶವನ್ನು ಕೇಳಲು ಜೆರುಸಲೇಮಿನಿಂದಲೂ, ಜುದೇಯ ಮತ್ತು ಜೋರ್ಡನ್ ನದಿಯ ಸುತ್ತಲಿದ್ದ ಎಲ್ಲಾ ಸ್ಥಳಗಳಿಂದಲೂ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆರುಜಲೆಮ್ ಮನ್ತಲ್ಯಾ ಶಾರಾತ್ನಾ ಜುದೆಯಾ ಮನ್ತಲ್ಯಾ ಇಡಿ ಪ್ರಾಂತ್ಯಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ಅಜು-ಬಾಜುಕ್ ಹೊತ್ತ್ಯಾ ಗಾವಾನಿತ್ನಾ ಲೊಕಾ ಜುವಾಂವಾಕ್ಡೆ ಯೆಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:5
9 ತಿಳಿವುಗಳ ಹೋಲಿಕೆ  

ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.


“ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.


ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?


ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.


ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.


ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು