ಮತ್ತಾಯ 3:7 - ಕನ್ನಡ ಸತ್ಯವೇದವು C.L. Bible (BSI)7 ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಸುಮಾರ್ ಸಾದುಸೆವಾ ಅನಿ ಫಾರಿಜೆವಾ ಬಾಲ್ತಿಮ್ ಘೆವ್ಕ್ ಯೆತಲೆ ಬಗುನ್ ಜುವಾಂವ್ “ಅರೆ! ಸಾಪಾಚ್ಯಾ ಪಿಲ್ಲಾನೊ, ಫಿಡೆ ಯೆತಲ್ಯಾ ನಾಸಾತ್ನಾ ಚುಕ್ವುನ್ ಘೆವ್ಕ್ ತುಮ್ಕಾ ಉಶಾರ್ಕಿ ಕೊನ್ ದಿಲ್ಯಾನಿ? ಅಧ್ಯಾಯವನ್ನು ನೋಡಿ |