Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊಲ್ಯಾರ್ ತುಮ್ಚೆ ಪಾಪಾಚೆ ಜಿವನ್ ಅತ್ತಾ ಬದಲ್ಲಾ ಮನುನ್ ದಾಕ್ವುನ್ ದಿತಲಿ ಕಾಮಾ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:8
16 ತಿಳಿವುಗಳ ಹೋಲಿಕೆ  

ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು