Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:12 - ಕನ್ನಡ ಸತ್ಯವೇದವು C.L. Bible (BSI)

12 ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ಜುವಾಂವಾಕ್ ಬಂಧಿಖಾನ್ಯಾತ್ ಘಾಟ್ಲ್ಯಾನಿ ಮನ್ತಲೆ ಆಯಿಕ್ಲ್ಯಾನ್, ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:12
13 ತಿಳಿವುಗಳ ಹೋಲಿಕೆ  

ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:


ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.


ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.


ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು.


ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.


ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು