Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:13 - ಕನ್ನಡ ಸತ್ಯವೇದವು C.L. Bible (BSI)

13 ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೊ ನಜರೆತ್ ಮನ್ತಲ್ಯಾ ಗಾಂವಾತ್ ರ್‍ಹಾವ್ಕ್ ನಾ. ತೊ ಗಾಲಿಲಿಯಾ ಸಮುಂದರಾಚ್ಯಾ ಜಗ್ಗೊಳ್ ಹೊತ್ತ್ಯಾ ಜಬುಲುನ್ ಅನಿ ನಫ್ತಾಲಿ ಮನ್ತಲ್ಯಾ ಪ್ರಾಂತ್ಯಾತ್ ಹೊತ್ತ್ಯಾ ಕಫರ್‍ನವ್ ಮನ್ತಲ್ಯಾ ಮೊಟ್ಯಾ ಗಾಂವಾತ್ ಜಾವ್ನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:13
17 ತಿಳಿವುಗಳ ಹೋಲಿಕೆ  

ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.


ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.


ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.


ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.


ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.


ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?” ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದು ಉತ್ತರವಿತ್ತನು.


ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.


ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.


ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,


ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.


ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು