ಮತ್ತಾಯ 4:16 - ಕನ್ನಡ ಸತ್ಯವೇದವು C.L. Bible (BSI)16 ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾನಿ ಎಕ್ ಮೊಟೊ ಉಜ್ವೊಡ್ ಬಗಟ್ಲ್ಯಾನಿ, ಮರ್‍ನಾಚ್ಯಾ ಕಾಳ್ಕಾತ್ ಜಿವನ್ ಕರ್‍ತಲ್ಯಾ ಲೊಕಾಂಚ್ಯಾ ವರ್‍ತಿ ಉಜ್ವೊಡ್ ಫಾಕ್ಲೊ”. ಅಧ್ಯಾಯವನ್ನು ನೋಡಿ |
ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.