Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಸೈತಾನ್ ಜೆಜುಚಿ ಪರಿಕ್ಷಾ ಕರುಕ್ ಮನುನ್ ತೆಚೆಕ್ಡೆ ಯೆಲೆ ಅನಿ “ತಿಯಾ ದೆವಾಚೊ ಲೆಕ್ ಹೊಲ್ಯಾರ್ ಹ್ಯಾ ಗುಂಡ್ಯಾಕ್ನಿ ಭಾಕ್ರಿಯಾ ಹೊವ್ಕ್ ಹುಕುಮ್ ದಿ.” ಮನುನ್ ಸಾಂಗುಕ್ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:3
34 ತಿಳಿವುಗಳ ಹೋಲಿಕೆ  

ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.


ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು.


ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.


ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು