Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:9 - ಕನ್ನಡ ಸತ್ಯವೇದವು C.L. Bible (BSI)

9 “ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನನಗೆ ಸಾಷ್ಟಾಂಗನಮಸ್ಕಾರ ಮಾಡಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀನು ನನಗೆ ಅಡ್ಡಬಿದ್ದು ಆರಾಧಿಸಿದರೆ ನಾನು ಅವೆಲ್ಲವನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ, “ತಿಯಾ ಡೊಗ್ಲಾ ಘಾಲುನ್ ಮಾಜ್ಯಾ ಪಾಯಾ ಪಡ್ಲ್ಯಾರ್, ಹೆ ಸಗ್ಳೆ ಮಿಯಾ ತುಕಾ ದಿತಾ” ಮನುನ್ ಸೈತಾನಾನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:9
21 ತಿಳಿವುಗಳ ಹೋಲಿಕೆ  

ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು