Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:18 - ಕನ್ನಡ ಸತ್ಯವೇದವು C.L. Bible (BSI)

18 ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಕವ್ಡೆ ಪತರ್ ಜಗ್ ಅನಿ ಸರ್ಗ್ ಹಾಯ್, ತವ್ಡೆ ಪತರ್ ಮೊಯ್ಜೆಚ್ಯಾ ಖಾಯ್ದ್ಯಾನಿತ್ಲೆ ಎಕ್ ಅಕ್ಷಾರ್ ಹೊಂವ್ದಿ ಎಕ್ ಟಿಕ್ಕೊ ಹೊಂವ್ದಿ ಪುಸುನ್ ಜಾಯ್‌ ನಸ್ತಾನಾ ತೆನಿ ಸಾಂಗಲ್ಲೆ ಸಗ್ಳೆ ಪುರಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:18
82 ತಿಳಿವುಗಳ ಹೋಲಿಕೆ  

“ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.


ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.


ಇವೆಲ್ಲವು ಸಂಭವಿಸುವುದಕ್ಕೆ ಮುಂಚೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”


ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು, “ನಿಮಗೆ ಖಂಡಿತವಾಗಿ ಹೇಳುತ್ತೇನೆ: ಯಾವನು ದೇವರ ಸಾಮ್ರಾಜ್ಯದ ನಿಮಿತ್ತ ಮನೆಯನ್ನಾಗಲಿ, ಮಡದಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳು ಮರಿಯನ್ನಾಗಲಿ ತ್ಯಜಿಸುತ್ತಾನೋ


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.


ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.


ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


ಜಗತ್ತಿನಾದ್ಯಂತ ಎಲ್ಲೆಲ್ಲಿ ಶುಭಸಂದೇಶವನ್ನು ಪ್ರಕಟಿಸಲಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು, ಇದು ನಿಶ್ಚಯ,” ಎಂದರು.


ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;


ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.


ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು,


ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.


ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.


ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.


ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ.


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.


ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ.


“ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು