Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:19 - ಕನ್ನಡ ಸತ್ಯವೇದವು C.L. Bible (BSI)

19 ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಮನುನ್, ಜೆ ಕೊನ್ ಹ್ಯಾತುರ್‍ಲೊ ಎಕ್ ಎಗ್ದಮ್ ಬಾರಿಕ್ಲೊ ಖಾಯ್ದೊಬಿ ಮೊಡ್ತಾ, ಅನಿ ಖಾಯ್ದೊ ಮೊಡುಕ್ ದುಸ್ರ್ಯಾಕ್ನಿ ಶಿಕ್ವುತಾ ತೆಕಾ ಸರ್ಗಾಚ್ಯಾ ರಾಜಾತ್ ಎಗ್ದಮ್ ಕಿಳ್ ಮನುನ್ ಲೆಕ್ಕ್ ಕರ್‍ತ್ಯಾತ್. ಅನಿ ಜೆ ಕೊನ್ ಖಾಯ್ದೆ ಬರೆ ಕರುನ್ ಪಾಳ್ತಾ, ಅನಿ ದುಸ್ರ್ಯಾಕ್ನಿಬಿ ಪಾಳುಕ್ ಶಿಕ್ವುತಾ ತೊ ಸರ್ಗಾಚ್ಯಾ ರಾಜಾತ್ ಲೈ ಮೊಟೊ ಹೊವ್ನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:19
38 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.


ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು