Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:22 - ಕನ್ನಡ ಸತ್ಯವೇದವು C.L. Bible (BSI)

22 ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:22
93 ತಿಳಿವುಗಳ ಹೋಲಿಕೆ  

“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.


ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II


ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?


ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.


ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.


ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.


“ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.


ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.


ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು;


ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.


ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು