Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:24 - ಕನ್ನಡ ಸತ್ಯವೇದವು C.L. Bible (BSI)

24 ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತುಜಿ ಕಾನಿಕ್ ಥೈಚ್ ಅಲ್ತಾರಿಕ್ಡೆ ಸೊಡ್ ಅನಿ ತುಜ್ಯಾ ಭಾವಾಕ್ಡೆ ಜಾ ಅನಿ ತೆಚೆ ವಾಂಗ್ಡಾ ಎಕ್ ಹೊ ಅನಿ ಪರ್ತುನ್ ಯೆವ್ನ್ ತುಜಿ ಕಾನಿಕ್ ದೆವಾಕ್ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:24
13 ತಿಳಿವುಗಳ ಹೋಲಿಕೆ  

ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ವ್ಯಾಜ್ಯವನ್ನು ನೆರೆಯವನ ಸಂಗಡವೆ ಚರ್ಚಿಸಿ ತೀರ್ಮಾನಿಸಿಕೊ; ನೆರೆಹೊರೆಯವರ ಗುಟ್ಟನ್ನು ಬಯಲು ಮಾಡಬೇಡ.


ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.


ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.


ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು