ಮತ್ತಾಯ 5:28 - ಕನ್ನಡ ಸತ್ಯವೇದವು C.L. Bible (BSI)28 ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಖರೆ ಮಿಯಾ ತುಮ್ಕಾ ಸಾಂಗ್ತಾ: ಕೊನ್ತರ್ ಎಕ್ಲ್ಯಾನ್ ಎಕ್ ಬಾಯ್ಕೊಮನ್ಸಿಕ್ ಬಗುನ್ ಬುರ್ಶಿ ಆಶಾ ಕರ್ಲ್ಯಾರ್, ತೆನಿ ಅಪ್ನಾಚ್ಯಾ ಮನಾತುಚ್ ತಿಚೆಕ್ಡೆ ವೆಭಿಚಾರ್ ಕರ್ಲ್ಯಾ ಸರ್ಕೆ ಹೊಲೆ. ಅಧ್ಯಾಯವನ್ನು ನೋಡಿ |