Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:3 - ಕನ್ನಡ ಸತ್ಯವೇದವು C.L. Bible (BSI)

3 “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:3
55 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.


ಯಜಮಾನನು ಮನೆಗೆ ಹಿಂದಿರುಗಿಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.


ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು