Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:30 - ಕನ್ನಡ ಸತ್ಯವೇದವು C.L. Bible (BSI)

30 ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಜೊ ಉಜ್ವೊ ಹಾತ್ ತುಕಾ ಪಾಪ್ ಕರುಕ್ ಕಾರನ್ ಹೊತಾ ಜಾಲ್ಯಾರ್, ತೊ ಕಾತ್ರುನ್ ಕಾಡ್ ಅನಿ ಧುರ್ ನ್ಹೆವ್ನ್ ಟಾಕ್. ತುಜೆ ಸಗ್ಳೆ ಆಂಗ್ ನರ್‍ಕಾತ್ ನ್ಹೆವ್ನ್ ಟಾಕ್ತಲ್ಯಾಚ್ಯಾನ್ಕಿ ತುಜೊ ಎಕ್ ಹಾತ್ ನಸ್ತಾನಾ ರ್‍ಹಾತಲೆ ತುಕಾ ಕವ್ಡೆಕಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:30
19 ತಿಳಿವುಗಳ ಹೋಲಿಕೆ  

ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;


ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.


ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು