Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:34 - ಕನ್ನಡ ಸತ್ಯವೇದವು C.L. Bible (BSI)

34 ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ನಾನು ನಿಮಗೆ ಹೇಳುವದೇನಂದರೆ - ಆಣೆಯನ್ನೇ ಇಡಬೇಡ. ಆಕಾಶದ ಮೇಲೆ ಆಣೆ ಇಡಬೇಡ; ಅದು ದೇವರ ಸಿಂಹಾಸನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮಿ ಕಸ್ಲಿಬಿ ಗೊಸ್ಟ್ ದಿತಾನಾ ಆನ್ ಘಾಲುನಕಾಶಿ, ಸರ್ಗಾಚ್ಯಾ ನಾವಾನ್ ಆನ್ ಘಾಲುನಕಾಶಿ, ದೆವಾಚೆ ಸಿವಾಸನ್ ತೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:34
8 ತಿಳಿವುಗಳ ಹೋಲಿಕೆ  

ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು