Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:39 - ಕನ್ನಡ ಸತ್ಯವೇದವು C.L. Bible (BSI)

39 ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ತುಮ್ಕಾ ಕೊನ್ ತರ್ ವಾಯ್ಟ್ ಕರ್‍ಲ್ಯಾನಾತ್ ಜಾಲ್ಯಾರ್ ತೆಚೊ ಶೆಡ್ ಕಾಡುನ್ ಘೆವ್‌ನಕಾಶಿ, ಕೊನ್ಬಿ ತುಮ್ಚ್ಯಾ ಉಜ್ವ್ಯಾ ಗಾಲಾರ್ ಮಾರ್‍ಲ್ಯಾರ್, ತುಜ್ಯಾ ರೊಡ್ಡ್ಯಾ ಬಾಜುಚ್ಯಾ ಗಾಲಾರ್‍ಬಿ ತೆಕಾ ಮಾರುಕ್ ಸೊಡ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:39
24 ತಿಳಿವುಗಳ ಹೋಲಿಕೆ  

ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.


ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ಕಣ್ಣಿಗೆ ಬಟ್ಟೆ ಕಟ್ಟಿ, “ನಿನ್ನನ್ನು ಹೊಡೆದವರಾರು? ಪ್ರವಾದಿಸು,” ಎಂದು ಕೇಳುತ್ತಿದ್ದರು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು.


ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ಆಗ ಯೇಸು, “ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು