Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:42 - ಕನ್ನಡ ಸತ್ಯವೇದವು C.L. Bible (BSI)

42 ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಿನ್ನನ್ನು ಬೇಡುವವನಿಗೆ ಕೊಡು; ನಿನ್ನಲ್ಲಿ ಕಡಾ ಈಸಿಕೊಳ್ಳಬೇಕೆಂದು ಬಂದವನಿಗೆ ಮುಖತಿರುವಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಕೊನ್ ತರ್ ಕಾಯ್ತರ್ ತುಮ್ಚೆಕ್ಡೆ ಮಾಗ್ಲ್ಯಾರ್ ತೆ ತನ್ನಾಚ್ ತೆಕಾ ದಿವಾ; ಕೊನ್ ತರ್ ತುಮ್ಚೆಕ್ಡೆ ಕಾಯ್ತರ್ ಉಸ್ನೆ ಮಾಗ್ಲ್ಯಾರ್ ತೆ ತೆಂಕಾ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:42
26 ತಿಳಿವುಗಳ ಹೋಲಿಕೆ  

ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.


ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು