Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:46 - ಕನ್ನಡ ಸತ್ಯವೇದವು C.L. Bible (BSI)

46 ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಭ್ರಷ್ಟರೂ ಹಾಗೆ ಮಾಡುವದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊಚ್ ತುಮಿ ಪ್ರೆಮ್ ಕರ್‍ಲ್ಯಾರ್ ದೆವಾನ್ ತುಮ್ಕಾ ಕಶ್ಯಾಕ್ ಪ್ರತಿಫಳ್ ದಿವ್ಚೆ? ತೆರ್‍ಗಿ ವಸುಲಿ ಕರ್ತಲೆಬಿ ತಸೆಚ್ ಕರ್‍ತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:46
19 ತಿಳಿವುಗಳ ಹೋಲಿಕೆ  

ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.


ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.


ಅನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದಾಗ,


ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.


ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು