Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:48 - ಕನ್ನಡ ಸತ್ಯವೇದವು C.L. Bible (BSI)

48 ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಕಸೊ ಸರ್‍ಗಾ ವೈಲೊ ತುಮ್ಚೊ ಬಾಬಾ ಸಗ್ಳ್ಯಾ ರಿತಿನ್ ಪರಿಪುರ್ನ್, ತಸೆ ತುಮಿಬಿ ಸಗ್ಳ್ಯಾ ರಿತಿನ್ ಪರಿಪುರ್ನ್ ಹೊವ್ನ್ ರ್‍ಹಾವಾ!.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:48
25 ತಿಳಿವುಗಳ ಹೋಲಿಕೆ  

ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?


ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು