Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:5 - ಕನ್ನಡ ಸತ್ಯವೇದವು C.L. Bible (BSI)

5 ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆ ಕೊನ್ ಖಾಲ್ತಿ ಹೊವ್ನ್ ಹಾತ್ ತೆನಿ ಕವ್ಡೆ ಸುಖಿ; ದೆವಾನ್ ತೆಂಕಾ ದಿತಾ ಮನುನ್ ಗೊಸ್ಟ್ ದಿಲ್ಲೆ ತೆನಿ ಘೆತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:5
30 ತಿಳಿವುಗಳ ಹೋಲಿಕೆ  

ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.


ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II


ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II


ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು