Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:6 - ಕನ್ನಡ ಸತ್ಯವೇದವು C.L. Bible (BSI)

6 ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾಕ್ ಕಾಯ್ ಪಾಜೆ ತೆ ಕರ್‍ತಲೆಚ್ ಅಪ್ನಾಚಿ ಮೊಟಿ ಆಶಾ ಕರುನ್ ಘೆಟಲ್ಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಚಿ ಸಗ್ಳಿ ಆಶಾ ಪುರಾ ಹೊಯ್ ಸರ್ಕೆ ಕರ್‍ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:6
29 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು