Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:8 - ಕನ್ನಡ ಸತ್ಯವೇದವು C.L. Bible (BSI)

8 ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿರ್ಮಲಚಿತ್ತರು ಧನ್ಯರು; ಅವರು ದೇವರನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರಿಶುದ್ಧ ಹೃದಯವುಳ್ಳವರು ಧನ್ಯರು. ಅವರು ದೇವರನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಬರ್‍ಯಾ ಮನಾಚಿ ಲೊಕಾ ಕವ್ಡಿ ಸುಖಿ; ತೆನಿ ದೆವಾಕ್ ಬಗ್ತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:8
25 ತಿಳಿವುಗಳ ಹೋಲಿಕೆ  

ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಶುದ್ಧನಿಗಾತ ಪರಿಶುದ್ಧನು ಮೂರ್ಖನಿಗಾತ ಮಹಾವಕ್ರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು