Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:16 - ಕನ್ನಡ ಸತ್ಯವೇದವು C.L. Bible (BSI)

16 “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ತುಮಿ ಉಪಾಸ್ ಹೊತ್ತ್ಯಾ ತನ್ನಾ, ಕುಸ್ಡ್ಯಾ ಲೊಕಾನಿ ಕರ್ಲ್ಯಾ ಸರ್ಕೆ ತುಮ್ಚೆ ತೊಂಡ್ ಬಾವ್ಲ್ಯಾ ಸರ್ಕೆ ಕರುನ್ ಘೆವ್ನ್ ರ್‍ಹಾವ್‍ನಕಾಸಿ, ಸಗ್ಳೆಜಾನಾಕ್ನಿ ಅಪ್ನಿ ಉಪಾಸ್ ಕರುಕ್ ಲಾಗ್ಲಾ ಮನುನ್ ಕಳುಕ್ ಪಾಜೆ ಮನುನ್ ತೆನಿ ತಸೆ ಕರುನ್ ಘೆವ್ನ್ ರ್‍ಹಾತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಸಗ್ಳೆ ಪ್ರತಿಫಳ್ ತೆಂಕಾ ಗಾವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:16
25 ತಿಳಿವುಗಳ ಹೋಲಿಕೆ  

ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು.


ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II


ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.


ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಇದನ್ನು ನೋಡಿದ ಸೇವಕರು ಅವನಿಗೆ, “ಇದೇನು ನೀವು ಮಾಡಿದ್ದು? ಹುಡುಗ ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿರಿ. ಹುಡುಗ ಸತ್ತ ನಂತರ ಎದ್ದು ಊಟಮಾಡಿದಿರಿ!” ಎಂದರು.


ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.


ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.


“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು