Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:2 - ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತೆಚೆಸಾಟ್ನಿ ಕನ್ನಾಬಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ತುಮಿ ಕಾಯ್ಬಿ ದಿತಾನಾ, ಕುಸ್ಡ್ಯಾ ಲೊಕಾನಿ ಲೊಕಾಕ್ನಿ ದಾಕ್ವುಕ್ ಮನುನ್ ಸಿನಾಗೊಗಾತ್ನಿ ಅನಿ ವನಿಯಾತ್ನಿ ಕರ್‍ಲ್ಯಾ ಸರ್ಕೆ ಕರುನಕಾಸಿ. ತೆನಿ ಅಶೆ ಕರಲ್ಲ್ಯಾ ತನ್ನಾ ತಿ ಮಾನ್ಸಾ ತೆಂಕಾ ಹೊಗಳ್ತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಗಾವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:2
56 ತಿಳಿವುಗಳ ಹೋಲಿಕೆ  

“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


“ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?


ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


“ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


“ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.


ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ.


ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?


ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು